ಕರಾವಳಿ

ಉಡುಪಿ: ಪೊಲೀಸ್ ಹೆಡ್‌ಕಾನ್ಸ್‌ಸ್ಟೇಬಲ್ ಶಿವಾನಂದ ಅವರಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ

Pinterest LinkedIn Tumblr

ಉಡುಪಿ: ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹೆಡ್ ಕಾನ್ಸ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಾನಂದ ಬಿ., ಗಣರಾಜ್ಯೋತ್ಸವ ಸಂದರ್ಭದಲ್ಲಿ ಅತ್ಯುನ್ನತ ಸೇವೆಗಾಗಿ ನೀಡುವ ರಾಷ್ಟ್ರಪತಿ ಅವರ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.

2005ರಲ್ಲಿ ಪೊಲೀಸ್ ಇಲಾಖೆ ಸೇರ್ಪಡೆಗೊಂಡ ಇವರು, 2009ರಿಂದ ಜಿಲ್ಲಾ ಪೊಲೀಸ್ ಕಚೇರಿಯ ಅಪರಾಧ ಶಾಖೆ, ಚುನಾವಣೆ ಕೋಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಇವರು 2019ರಲ್ಲಿ ಮುಖ್ಯಮಂತ್ರಿ ಪದಕವನ್ನು ಪಡೆದಿದ್ದರು.

ಏಳು ವರ್ಷಗಳ ಹಿಂದೆ ಇವರು ಹೆಡ್‌ಕಾನ್ಸ್‌ಸ್ಟೇಬಲ್ ಆಗಿ ಪದೋನ್ನತಿ ಹೊಂದಿದ್ದರು. ಪೊಲೀಸ್ ಕರ್ತವ್ಯ ಕೂಟದಲ್ಲಿ ಎರಡು ಬಾರಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯನ್ನು ಪ್ರತಿನಿಧಿಸಿದ್ದರು.

Comments are closed.