ಕರಾವಳಿ

ಉಡುಪಿಯಲ್ಲಿ 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಯ ಬಂಧನ

Pinterest LinkedIn Tumblr

ಉಡುಪಿ: ಮೂರು ದಿನಗಳ ಹಿಂದೆ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35) ಬಂಧಿತ ಆರೋಪಿ.

ಈತ ಜ.23ರಂದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಈ ಪ್ರಕರಣದಲ್ಲಿ ಆರೋಪಿಯು ಅಪರಿಚಿತನಾಗಿದ್ದರಿಂದ, ಆತನ ಪತ್ತೆಗೆ ಪೊಲೀಸರ ಐದು ತಂಡಗಳನ್ನು ರಚಿಸಲಾಗಿತ್ತು. ಹಲವಾರು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ಆರೋಪಿಯ ಮಾಹಿತಿಯನ್ನು ಸಾರ್ವಜನಿಕರಿಗೂ ಪ್ರಚಾರಪಡಿಸಲಾಗಿತ್ತು.

ಸಾರ್ವಜನಿಕರ ಸಹಾಯ ಮತ್ತು ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಸತತ ಪ್ರಯತ್ನದಿಂದ, ಜ.26ರಂದು ಸಂಜೆ ಆರೋಪಿ ಮುತ್ತುನನ್ನು ಶ್ರೀಕೃಷ್ಣ ಮಠದ ಪರಿಸರದ ವಾದೀರಾಜ 3ನೇ ಕ್ರಾಸ್ ಬಳಿ ಬಂಧಿಸಲಾಯಿತು. ಆರೋಪಿ ಉಡುಪಿಯಲ್ಲಿ ಯಾವುದೇ ವಿಳಾಸವನ್ನು ಹೊಂದದೆ ಅಲೆಮಾರಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.