ಕರ್ನಾಟಕ

ಬಡತನ ಮುಕ್ತ ಭಾರತ ನಿರ್ಮಾಣ ಮಾಡುವತ್ತ ಕೇಂದ್ರದ ಬಜೆಟ್ 2025-26: ಸಂಸದ ಬಿ.ವೈ ರಾಘವೇಂದ್ರ

Pinterest LinkedIn Tumblr

ಶಿವಮೊಗ್ಗ: 2025-26ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಬಡವರು, ಯುವಕರು, ರೈತರು ಹಾಗೂ ಮಹಿಳೆಯರ ಏಳಿಗೆಗಾಗಿ ಹೆಚ್ಚು ಆದ್ಯತೆಯನ್ನು ನೀಡಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ನೆರವು ನೀಡುವ ದೃಷ್ಟಿಯಿಂದ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಅಡಿಯಲ್ಲಿ ಕಡಿಮೆ ಇಳುವರಿ ಇರುವ ರಾಷ್ಟ್ರದ ನೂರು ಜಿಲ್ಲೆಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಇದರಿಂದ ಸುಮಾರು 1.7 ಕೋಟಿ ರೈತರು ಇದರ ಲಾಭ ಪಡೆಯಲಿದ್ದಾರೆ. ಯುವಕರನ್ನು ಕೃಷಿಯತ್ತ ಸೆಳೆಯುವಲ್ಲಿ ಕೇಂದ್ರ ಸರ್ಕಾರ ಹೆಚ್ಚು ಗಮನ ನೀಡಿದೆ. ಮೂರು ಯೂರಿಯಾ ಪ್ಲಾಂಟ್ ಗಳನ್ನು ದೇಶದಲ್ಲಿ ಆರಂಭಿಸಲಾಗುತ್ತದೆ. ಕೃಷಿ ಕಾರ್ಡ್ ಲೋನ್ ಮೊತ್ತವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಮೀನುಗಾರರ ವಲಯಕ್ಕೆ 60,000 ಕೋಟಿ ಅನುದಾನ ನೀಡಲಾಗಿದೆ. ಅದಲ್ಲದೆ ರೈತ ಉತ್ಪಾದನಾ ಸಹಕಾರ ಸಂಘಗಳ ರಚನೆ ಮಾಡಲು ಕ್ರಮ ವಹಿಸಲಾಗಿದೆ ಕೃಷಿ ಉತ್ಪನ್ನಗಳನ್ನು ಹೆಚ್ಚಳ ಮಾಡಲು ಆದ್ಯತೆ ನೀಡಲಾಗಿದೆ.

ಮಹಿಳೆಯರಿಗೆ ಸಂಬಂಧಿಸಿದಂತೆ ಗರ್ಭಿಣಿ ಮಹಿಳೆಯರು ಮತ್ತು ಬಾಣಂತಿಯರಿಗೆ  ಪೋಷಕಾಂಶಗಳ ಆಹಾರ ನೀಡುವಲ್ಲಿ ಒಂದು ಕೋಟಿ ಮಹಿಳೆಯರಿಗೆ ಅನುಕೂಲವಾಗಲಿದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮಹಿಳೆಯರಿಗೆ ರೂ 5 ಲಕ್ಷ ಸಾಲ ನೀಡುವ ಯೋಜನೆಯನ್ನು ಘೋಷಣೆಯನ್ನು ಮಾಡಿದೆ.

ಯುವಕರ ಏಳಿಗೆಗಾಗಿ ಸಂಶೋಧನೆ ಹಾಗೂ ಅಭಿವೃದ್ಧಿಗಾಗಿ 20,000 ಕೋಟಿ ಮೀಸಲಿಡಲಾಗಿದೆ ಐಐಟಿ ಮತ್ತು ಐಐಎಫ್ಸಿ ಗಳಿಗೆ ಅನುದಾನ ಹೆಚ್ಚಳ ಮಾಡಲಾಗಿದೆ ಶಿಕ್ಷಣ ಕ್ಷೇತ್ರದಲ್ಲಿ ಆರ್ಟಿಫಿಶೀಯಲ್ ಇಂಟೆಲಿಜೆನ್ಸ್ ಅಳವಡಿಕೆಗೆ 500 ಕೋಟಿ ಮೀಸಲಿಡಲಾಗಿದೆ. ‘ಮೇಕ್ ಫಾರ್ ಇಂಡಿಯಾ, ಮೇಕ್ ಫಾರ್ ವರ್ಲ್ಡ್’ ಎಂಬ ಧ್ಯೇಯವನ್ನು ಇಟ್ಟುಕೊಂಡು ಐಐಟಿ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಶೇಕಡ 100 ರಷ್ಟು ಹೆಚ್ಚುವರಿ ಸೀಟುಗಳು ಲಭಿಸುವಂತೆ ಕ್ರಮ ವಹಿಸಲಾಗಿದೆ.

ಆರೋಗ್ಯ ಕ್ಷೇತ್ರದಲ್ಲಿಯೂ ಸಹ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಎಲ್ಲಾ ಜಿಲ್ಲೆಗಳಲ್ಲಿ ಡೇ ಕೇರ್ ಯೂನಿಟ್ ಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ ಹಾಗೆಯೇ ಎಲ್ಲಾ ಜಿಲ್ಲೆಗಳಲ್ಲಿಯೂ ಸಹ ಕ್ಯಾನ್ಸರ್ ಕೇಂದ್ರಗಳನ್ನು ತೆರೆಯಲು ಸೂಕ್ತ ಬಜೆಟ್ ನೀಡಲಾಗಿದೆ.

ದೇಶದ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ, ನಗರ ಅಭಿವೃದ್ಧಿಗಾಗಿ ಒಂದು ಲಕ್ಷ ಕೋಟಿ ಅನುದಾನವನ್ನು ನೀಡಲಾಗಿದೆ. ಮುಂದಿನ 10 ವರ್ಷಗಳಲ್ಲಿ 100 ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಹಾಗೆಯೇ, ಮೇಕ್ ಇನ್ ಇಂಡಿಯಾ ಅಡಿಯಲ್ಲಿ  ಇಲೆಕ್ರ್ಟಿಕಲ್ ವಾಹನ, ಸೋಲಾರ್, ಬ್ಯಾಟರಿ ಮೋಟಾರ್ ಗಳ ತಯಾರಿಕೆಗೆ ಒತ್ತು ನೀಡಲಾಗಿದೆ.

ಆದಾಯ ತೆರಿಗೆಗೆ  ಸಂಬಂಧಿಸಿದಂತೆ ನಮ್ಮ ಸರ್ಕಾರ 12 ಲಕ್ಷಗಳವರೆಗೆ ಯಾವುದೇ ಆದಾಯ ತೆರಿಗೆ ನೀಡುವಂತಿಲ್ಲ ಎಂದು ಘೋಷಣೆ ಮಾಡಿರುವುದರಿಂದ ಬಹಳಷ್ಟು ಬಡ ಹಾಗೂ ಮಧ್ಯಮ ವರ್ಗದವರಿಗೆ ಒಂದು ದೊಡ್ಡ ಕೊಡುಗೆಯನ್ನು ನಮ್ಮ ಕೇಂದ್ರ ಸರ್ಕಾರ ಈ ಬಜೆಟ್ ನಲ್ಲಿ ನೀಡಿದೆ. ಒಟ್ಟಾರೆ ದೇಶದ ಅಭಿವೃದ್ಧಿಗಾಗಿ ಮಾಡಿದ ಬಜೆಟ್ ಆಗಿದ್ದು ಒಟ್ಟಾರೆ ವಿಕಸಿತ ಭಾರತ ನಿರ್ಮಾಣಕ್ಕೆ ಈ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ ಎಂದು ಬಿ.ವೈ ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.