ಕುಂದಾಪುರ: ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಹೊಳೆ ಗ್ರಾಮದ ಅರಮನೆಕೊಡ್ಲು ಎಂಬಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕೆಂಪುಕಲ್ಲು ಬಂಡೆಗಳನ್ನು ಸ್ಪೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅನಂತಮೂರ್ತಿ ಭಟ್ ಹಾಗೂ ಸಹಕರಿಸಿದ ಪ್ರವೀಣ್ ಎನ್ನುವರನ್ನು ಬಂಧಿಸಲಾಗಿದೆ.
ಆರೋಪಿ ಅನಂತಮೂರ್ತಿ ಜಾಗದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಕಲ್ಲು ಬಂಡೆಗಳನ್ನು ಸ್ಪೋಟಿಸಿದ್ದು ಸಮೀಪದ ಮನೆಗಳಿಗೆ ಹಾನಿಯಾದ ಬಗ್ಗೆ ದೂರಲಾಗಿತ್ತು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಸುಮೋಟೋ ಅಪರಾಧ ಪ್ರಕರಣ ದಾಖಲಾಗಿತ್ತು. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದಾಗ ಸ್ಪೋಟಕ್ಕೆ ಬಳಸಿದ ಪರಿಕರಗಳು ಕಂಡುಬಂದಿದ್ದವು ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟ ನಡೆಸಿದ ಜಾಗದ ಮಾಲೀಕ ಅನಂತಮೂರ್ತಿ, ಆತನಿಗೆ ಸಹಕರಿಸಿದ ಪ್ರವೀಣ್ನನ್ನು ಶಂಕರನಾರಾಯಣ ಪೊಲೀಸ್ ಠಾಣೆ ಪಿಎಸ್ಐ ನಾಸಿರ್ ಹುಸೇನ್ ಹಾಗೂ ಸಿಬ್ಬಂದಿಗಳು ಶನಿವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಪ್ರಕರಣ ತನಿಖೆಯಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Comments are closed.