ಕರ್ನಾಟಕ

ಮೂಡಾ ಕೇಸ್ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಸಿದ್ದರಾಮಯ್ಯಗೆ ಬಿಗ್ ರಿಲೀಫ್

Pinterest LinkedIn Tumblr

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಈ ಪ್ರಕರಣದಲ್ಲಿ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.

ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಇದೀಗ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಶುಕ್ರವಾರ ತೀರ್ಪು ಪ್ರಕಟಿಸಿದ್ದಾರೆ.

ತೀರ್ಪಿಗೆ ಪ್ರತಿಕ್ರಿಯಿಸಿದ ಅರ್ಜಿದಾರರಾದ ಸ್ನೇಹಮಯಿ ಕೃಷ್ಣ, ಇದು ತಾತ್ಕಾಲಿಕ ಹಿನ್ನಡೆಯಾಗಿದೆ. ನ್ಯಾಯಾಲಯದ ಆದೇಶ ಪ್ರತಿ ಲಭ್ಯವಾದ ನಂತರ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೊದಲ ಆರೋಪಿ ಎಂದು ಉಲ್ಲೇಖಿಸಲಾಗಿದ್ದು, ಅವರ ಪತ್ನಿ ಬಿಎಂ ಪಾರ್ವತಿ ಅವರನ್ನು ಎರಡನೇ ಆರೋಪಿಯನ್ನಾಗಿ ಮಾಡಲಾಗಿದೆ.

Comments are closed.