ಉಡುಪಿ: ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ರೈಲ್ವೆ ಟ್ರ್ಯಾಕ್ ಬಳಿಯ ಬಾಲಕರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಬಗ್ಗೆ ಮೂರು ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ವಿಡಿಯೋದಲ್ಲಿರುವ ಸೊತ್ತುಗಳು ರೈಲ್ವೆ ಇಲಾಖೆಗೆ ಸೇರಿದವುಗಳಾಗಿರುವುದರಿಂದ ಈ ಬಗ್ಗೆ ಕೊಂಕಣ್ ರೈಲ್ವೆ ಕಾನೂನು ವಿಭಾಗದಿಂದ ನೀಡಿದ ವರದಿಯಂತೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಬಾಲಕರ ತಂದೆಯ ದೂರಿನ ಅನ್ವಯ ಮಕ್ಕಳಿಗೆ ಹೊಡೆದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಮತ್ತು ಬಾಲಕರಿಗೆ ದ್ವಿಚಕ್ರ ವಾಹನ ನೀಡಿದ ಬಗ್ಗೆಯೂ, ಅವರ ತಂದೆಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣವು ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ವಿರುದ್ಧ ಇರುವುದರಿಂದ, ಈ ಬಗ್ಗೆ ಸುಪ್ರೀಂ ಕೋರ್ಟ್ ಹಾಗೂ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಯಮಗಳನ್ನು ಪಾಲಿಸುವುದು ಅಗತ್ಯವಾಗಿರುತ್ತದೆ. ತಪ್ಪಿದ್ದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಎಸ್ಪಿ ಡಾ. ಅರುಣ್ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.