ಕುಂದಾಪುರ: ತಾಲೂಕಿನ ಕೋಟೇಶ್ವರ ಹಳೆಅಳಿವೆ ಬಳಿ ಯುವಕನೊರ್ವ ಸಮುದ್ರದಲ್ಲಿ ಮಾರಣಬಲೆ ಬಿಡಲು ಹೋಗಿ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟ ಘಟನೆ ಫೆ. 25 ರಂದು ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಬೀಜಾಡಿ ನಿವಾಸಿ ಮೇಘರಾಜ್ (26) ಮೃತ ಯುವಕ ಎಂದು ಗುರುತಿಸಲಾಗಿದೆ.
ಮೇಘರಾಜ್ ಅವರು ಮಧ್ಯಾಹ್ನದ ಸುಮಾರಿಗೆ ಬೀಜಾಡಿ ಬಳಿ ಸಮುದ್ರದಲ್ಲಿ ಮಾರಣಬಲೆ ಬಿಡಲೆಂದು ಹೋದ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ನೀರುಪಾಲಾಗಿದ್ದು ಸಂಜೆ ವೇಳೆ ಬೀಜಾಡಿ ಸಮೀಪ ಕಡಲ ಎಡಭಾಗದಲ್ಲಿ ಮೃತದೇಹ ದಡ ಸೇರಿರುತ್ತದೆ.
ತಕ್ಷಣ ಸ್ಥಳಕ್ಕಾಗಮಿಸಿದ ಗಂಗೊಳ್ಳಿ ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ಹಾಗೂ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿಗಳಾದ ಸುದರ್ಶನ್ ಎಸ್. ಕುಂದರ್, ಕೃಷ್ಣ ಕಾಂಚನ್, ಸಂತೋಷ್ ಪೂಜಾರಿ, ಸುಧಾಕರ್ ಖಾರ್ವಿ ಇವರು ಮೃತದೇಹವನ್ನು ಪರಿಶೀಲಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.
ಕುಂದಾಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Comments are closed.