ಕರ್ನಾಟಕ

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್:‌ ಸಮನ್ಸ್‌‌ಗೆ ತಡೆ ನೀಡಿದ ಹೈಕೋರ್ಟ್!

Pinterest LinkedIn Tumblr

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂಪ್ಪ ಅವರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ. ಅಲ್ಲದೆ ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದದ್ದರಿಂದ​ ಯಡಿಯೂಪ್ಪ ಅವರಿಗೆ ಬಿಗ್ ರಿಲೀಫ್​ ಸಿಕ್ಕಿದೆ. ಈ ವೇಳೆ ಬಿಎಸ್ ಯಡಿಯೂರಪ್ಪ ಅವರ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಹೇಳಿದ ನ್ಯಾಯಾಲಯವು ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ತಡೆ ನೀಡಿದೆ.

ವಿಚಾರಣೆ ವೇಳೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿತ್ತು. ಖುದ್ದು ಹಾಜರಾತಿಯಿಂದಲೂ ಹೈಕೋರ್ಟ್ ವಿನಾಯಿತಿ ನೀಡಿತ್ತು. 2024ರ ಫೆ‌ಬ್ರವರಿ 2ರಂದು ಅನುಚಿತವಾಗಿ ಸ್ಪರ್ಶಿಸಿದ ಆರೋಪವಿದೆ. ಒಂದು ತಿಂಗಳ ಬಳಿಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸ್ಥಳದಲ್ಲಿದ್ದ ಸಾಕ್ಷಿಗಳು ಆ ರೀತಿಯ ಘಟನೆ ನಡೆದಿಲ್ಲವೆಂದಿದ್ದಾರೆ.

ಬಾಲಕಿ, ಆಕೆಯ ತಾಯಿಯ ಹೇಳಿಕೆ ಮೇಲೆ ಆರೋಪಪಟ್ಟಿ ದಾಖಲಿಸಿದ್ದಾರೆ. ತಾಯಿಯ ಮೊಬೈಲ್​ನಲ್ಲಿದ್ದ ಸಂಭಾಷಣೆ ಬಿಎಸ್ ​ಯಡಿಯೂರಪ್ಪ ಅಳಿಸಿಲ್ಲ. ಪೊಲೀಸರು ಹಾಕಿರುವ ಐಟಿ ಸೆಕ್ಷನ್ ದೂರುದಾರರಿಗೆ ಅನ್ವಯವಾಗುತ್ತದೆ ಎಂದು ವಾದಿಸಿದರು.

1 ತಿಂಗಳು 12 ದಿನ ತಡವಾಗಿ ಪೊಕ್ಸೋ ಕೇಸ್ ದಾಖಲಿಸಲಾಗಿದೆ. ಘಟನೆ ನಡೆದಿದ್ದರೆ ಯಾರೂ ಇಷ್ಟು ತಡವಾಗಿ ದೂರು ದಾಖಲಿಸುತ್ತಿರಲಿಲ್ಲ. ಸಮನ್ಸ್ ರದ್ದುಪಡಿಸಿ ಹೊಸದಾಗಿ ಪರಿಶೀಲನೆಗೆ ಹಿಂದೆ ಆದೇಶಿಸಲಾಗಿತ್ತು. ಈಗ ವಿಶೇಷ ಕೋರ್ಟ್ ಕಾಗ್ನಿಜೆನ್ಸ್ ಪಡೆದು ಸಮನ್ಸ್ ಜಾರಿಗೊಳಿಸಿದೆ ಎಂದು ಬಿಎಸ್​ ಯಡಿಯೂರಪ್ಪ ಪರ ವಕೀಲರು ವಾದಿಸಿದರು.

ಬಿ.ಎಸ್​ ಯಡಿಯೂರಪ್ಪ ವಕೀಲರ ಮನವಿಗೆ ಅಡ್ವೊಕೇಟ್ ಜನರಲ್ ಆಕ್ಷೇಪಿಸಿದರು. ಹೈಕೋರ್ಟ್ ಸೂಚನೆಯಂತೆ ವಿಶೇಷ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಹೀಗಾಗಿ ಸಮನ್ಸ್​​ಗೆ ತಡೆ ನೀಡದಂತೆ ಮನವಿ ಮಾಡಿದರು.

 

Comments are closed.