ಕುಂದಾಪುರ: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ್ ಅವರು ಸೋಮವಾರ ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಗೆ ಪೂಜೆ ಸಲ್ಲಿಸಿದರು.
ಕೊಲ್ಲೂರು ದೇವಿಯ ಭಕ್ತರಾದ ಇಳಯರಾಜ್ ಅವರು ಪ್ರತಿವರ್ಷವೂ ಕೊಲ್ಲೂರಿಗೆ ಭೇಟಿ ನೀಡುತ್ತಾರೆ. ಈ ಭೇಟಿಯ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ತಗ್ಗರ್ಸೆ, ಸದಸ್ಯ ರಘುರಾಮ ದೇವಾಡಿಗ ಆಲೂರು, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಹಿರಿಯ ಅರ್ಚಕ ಶ್ರೀಧರ್ ಅಡಿಗ ಮೊದಲಾದವರು ಇಳಯರಾಜ್ ಅವರನ್ನು ಗೌರವಿಸಿದರು.
Comments are closed.