ಉಡುಪಿ: ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ವಂಶ್ ಶೆಟ್ಟಿ (14) ಎಂದು ಗುರುತಿಸಲಾಗಿದೆ.
ಬಾಲಕ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತಕ್ಷಣ ಆತನನ್ನು ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಘಟನೆಯ ಬಳಿಕ ಆಸ್ಪತ್ರೆಯ ಬಳಿ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಮಹೇಶ್ ಆಸ್ಪತ್ರೆ ಜಂಕ್ಷನ್ ಅಪಘಾತ ವಲಯವಾಗಿದ್ದು, ಹಲವು ಅಪಘಾತಗಳು ಸಂಭವಿಸಿವೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.