ಕರಾವಳಿ

ತೆಕ್ಕಟ್ಟೆ ಸಮೀಪದ ಮಾಲಾಡಿಯಲ್ಲಿ ಮತ್ತೆ ಚಿರತೆ ಓಡಾಟ: ಸೆರೆಗಾಗಿ ಪಂಜರವಿಟ್ಟ ಅರಣ್ಯ ಇಲಾಖೆ

Pinterest LinkedIn Tumblr

ಕುಂದಾಪುರ: ತಾಲೂಕಿನ ತೆಕ್ಕಟ್ಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿನ ಶ್ರೀ ನಂದಿಕೇಶ್ವರ ದೇವಸ್ಥಾನ ಹಾಗೂ ಅಂಗನವಾಡಿ, ಶಾಲೆ ಹಿಂಭಾಗದ ಹಾಡಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಈ ಭಾಗದಲ್ಲಿ ಆಗ್ಗಾಗೆ ಚಿರತೆ ಪ್ರತ್ಯಕ್ಷವಾಗುತ್ತಿದ್ದು  ನಿರಂತರ ಈ ಭಾಗದಲ್ಲಿ ಚಿರತೆ ಕಾಟವಿದ್ದರಿಂದ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು ಕುಂದಾಪುರ ವಲಯ ಅರಣ್ಯಾಧಿಕಾರಿ ರಾಘವೇಂದ್ರ‌ ನೇತೃತ್ವದಲ್ಲಿ, ಗಸ್ತು ಅರಣ್ಯ ಪಾಲಕರು ಹಾಗೂ ಸಿಬ್ಬಂದಿಗಳು ಬೋನ್ ಇಟ್ಟು ಚಿರತೆ ಹಿಡಿಯುವ ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ.

ಈ ಹಿಂದೆಯೂ ಮಾಲಾಡಿ ಅಸುಪಾಸಿನಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆಯು ನಾಯಿ, ಜಾನುವಾರು ಸೇರಿದಂತೆ ಸಾಕುಪ್ರಾಣಿಗಳನ್ನು ಹೊತ್ತೊಯ್ದಿದೆ. ಹಾಡುಹಗಲೇ ಕಾಣಿಸಿಕೊಂಡು ಜನರಲ್ಲಿ ಭೀತಿ ಸೃಷ್ಟಿಸಿದೆ. ಈ ಭಾಗದಲ್ಲಿ ಮೊದಲಿಗೆ 2018 ಆಗಸ್ಟ್ ತಿಂಗಳಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿತ್ತು. ಬಳಿಕ 2019 ಅ.6, ಡಿ.12, 2019, ಡಿ.24 ,2019 ರಲ್ಲಿ ಹಾಗೂ 2022 ರ ಎಪ್ರಿಲ್ ತಿಂಗಳಿನಲ್ಲಿ, 2022 ಅ.2 ರಂದು ಹಾಗೂ 2023 ಮಾರ್ಚ್ ಮತ್ತು ಜೂನ್ ತಿಂಗಳಿನಲ್ಲಿ ಚಿರತೆ ಅರಣ್ಯ ಇಲಾಖೆಯಿಟ್ಟ ಬೋನಿಗೆ ಬಿದ್ದಿತ್ತು.

 

Comments are closed.