ಉಳ್ಳಾಲ: ನಗರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮೂಲ್ಕಿಯ ಆಟೋ ರಿಕ್ಷಾ ಚಾಲಕ ಮತ್ತು ಕುಂಪಲ ಮತ್ತು ಮಂಗಳೂರಿನ ಇಬ್ಬರು ಸಹಚರರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಲ್ಕಿಯ ಆಟೋ ಚಾಲಕ ಪ್ರಭುರಾಜ್ (38), ಕುಂಪಲದ ಎಲೆಕ್ಟ್ರಿಷಿಯನ್ ಮಿಥುನ್ (30) ಮತ್ತು ಮಂಗಳೂರು ನಿವಾಸಿ ಮಣಿ (30) ಎಂದು ಗುರುತಿಸಲಾಗಿದೆ.
ಪಶ್ಚಿಮ ಬಂಗಾಳ ಮೂಲದ ಯುವತಿ ಕಳೆದ 2-3 ವರ್ಷಗಳಿಂದ ಪ್ಲೈವುಡ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಆಕೆ ಏಪ್ರಿಲ್ 16 ರಂದು ತನ್ನ ಸ್ನೇಹಿತನೊಂದಿಗೆ ಮತ್ತೊಂದು ಕಂಪನಿಯಲ್ಲಿ ಉದ್ಯೋಗಾವಕಾಶ ಪಡೆತುವ ಸಲುವಾಗಿ ಮಂಗಳೂರಿಗೆ ಬಂದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಗೆಳೆಯನ ಜೊತೆಗೆ ಜಗಳವಾಗಿ ಆತ ಈಕೆಯ ಮೊಬೈಲಿಗೆ ಹಾನಿ ಮಾಡಿದ್ದ.ನಂತರ ಅವಳು ತನ್ನ ಫೋನ್ ರಿಪೇರಿ ಮಾಡಲು ಆಟೋ ಏರಿದ್ದಳು. 5-6 ಗಂಟೆಗಳ ಕಾಲ ಆಕೆ ಆಟೋ ಡ್ರೈವರ್ ಜೊತೆಗೇ ಇದ್ದು ಮೊಬೈಲ್ ರಿಪೇರಿ ಹಣ ಕೂಡಾ ಆತನೇ ಪಾವತಿಸಿದ್ದ. ಆ ಬಳಿಕ ಆಕೆ ರಾತ್ರಿ ವೇಳೆ ಪ.ಬಂಗಾಳ ಹೋಗಲು ರೈಲ್ವೇ ನಿಲ್ದಾಣಕ್ಕೆ ಬಿಡಲು ಆಟೋ ಡ್ರೈವರಿಗೆ ಹೇಳಿದ್ದಳು. ಆದರೆ ಕಂಕನಾಡಿ ರೈಲ್ವೇ ನಿಲ್ದಾಣಕ್ಕೆ ಹೋಗದೇ ಆಟೋ ಡ್ರೈವರ್ ಮತ್ತಿಬ್ಬರ ಗೆಳೆಯರನ್ನು ಕರೆಸಿ ಬೇರೊಂದು ಜಾಗಕ್ಕೆ ಹೋಗುತ್ತಾರೆ. ಆ ಜಾಗದಲ್ಲಿ ಆಕೆಗೆ ಮದ್ಯಪಾನ ಮಾಡಿಸಿ, ಆಕೆ ಪ್ರಜ್ಞೆ ತಪ್ಪಿದ್ದು, ಪ್ರಜ್ಞೆ ಬಂದಾಗ ಅತ್ಯಾಚಾರ ನಡೆದಿರುವುದು ಆಕೆ ಗಮನಕ್ಕೆ ಬಂದಿದೆ.
ಮಾಹಿತಿ ಪಡೆದ ಪೊಲೀಸರು ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಆಕೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ಯುದು ಚಿಕಿತ್ಸೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯಕೀಯ ಚಿಕಿತ್ಸೆ ಪಡೆದು ಪ್ರಜ್ಞೆ ಮರಳಿದ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ತನ್ನ ಮೇಲೆ ಲೈಂಗಿಕ ದೌರ್ಜನ್ಯ/ಅತ್ಯಾಚಾರ ನಡೆದಿರಬಹುದು ಎಂದು ಆಕೆ ಶಂಕಿಸಿದ್ದಾಳೆ. ಅದರಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ
Comments are closed.