ಕುಂದಾಪುರ: ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕ ಪದ್ಮಭೂಷಣ ಡಾ. ಕೆ.ಜೆ. ಯೆಸುದಾಸ್ ಅವರು ತಮ್ಮ 79ನೇ ಹುಟ್ಟುಹಬ್ಬವನ್ನು ಪ್ರತಿವರ್ಷದಂತೆ ಈ ವರ್ಷವೂ ಕೂಡ ಶ್ರೀಕ್ಷೇತ್ರ ಕೊಲ್ಲೂರು ಶ್ರೀಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ, ಚಂಡಿಕಾ ಹೋಮ ನೆರವೇರಿಸವುದರ ಮೂಲಕ ಸರಳವಾಗಿ ಆಚರಿಸಿಕೊಂಡರು.
ಪತ್ನಿ ಪ್ರಭಾ ದಾಸ್ ಅವರೊಂದಿಗೆ ಕೊಲ್ಲೂರಿಗೆ ಆಗಮಿಸಿದ ಅವರು ಗುರುವಾರ ಬೆಳಗ್ಗೆ ದೇವರ ದರ್ಶನ ಪಡೆದರು. ಬಳಿಕ ದೇವಸ್ಥಾನದ ಪ್ರಾಂಗಾಣದಲ್ಲಿ ಹಾಕಲಾದ ವೇದಿಕೆಯಲ್ಲಿ ನಡೆದ ಭಕ್ತಿ ಸಂಗೀತ ಕಛೇರಿಯಲ್ಲಿ ಗೀತೆಗಳನ್ನು ಹಾಡಿ ಶ್ರೀ ದೇವಿಗೆ ಸಂಗೀತ ಸೇವೆಯನ್ನು ಅರ್ಪಿಸಿದರಲ್ಲದೇ ಸೇರಿದ ಸಹಸ್ರಾರು ಭಕ್ತರಿಗೆ ಭಕ್ತಿಸಾಗರದಲ್ಲಿ ತೇಲಿಸಿದರು.
ತಮ್ಮ ನೆಚ್ಚಿನ ಗಾಯಕ ಜೇಸುದಾಸ್ ಅವರ ಹುಟ್ಟು ಹಬ್ಬದ ಆಚರಣೆಗಾಗಿ ಕೇರಳ ಹಾಗೂ ವಿವಿಧ ಭಾಗಗಳಿಂದ ಬಂದಿದ್ದ ದೊಡ್ಡ ಸಂಖ್ಯೆಯ ಅಭಿಮಾನಿಗಳು, ಸಂಗೀತ ಕಚೇರಿಯ ಮಧುರ ಘಳಿಗೆಗೆ ಸಾಕ್ಷಿಗಳಾಗಿದ್ದರು.
ಚಂಡಿಕಾ ಹೋಮ ಹಾಗೂ ವಿವಿಧ ಪೂಜಾ ವಿಧಿಗಳನ್ನು ನೆರವೇರಿಸಿದ ಜೇಸುದಾಸ್ ಕುಟುಂಬಿಕರು ಶ್ರೀದೇವಿಯ ದರ್ಶನ ಪಡೆದರು.
Comments are closed.