ಕರಾವಳಿ

ಜೂ.15ರ ಸಂಕ್ರಮಣ ದಿನದಿಂದ ಭಕ್ತರಿಗೆ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದರ್ಶನ ಭಾಗ್ಯ

Pinterest LinkedIn Tumblr

ಕುಂದಾಪುರ: ಕೋವಿಡ್‌ 19 ಹಿನ್ನೆಲೆ ಕಳೆದ ಎರಡು ತಿಂಗಳಿಂದ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದು ಜೂ.15ರ ಸಂಕ್ರಮಣದಿಂದ ದೇಗುಲ ಭಕ್ತರ ದರ್ಶನಕ್ಕೆ ತೆರೆಯಲಾಗುವುದೆಂದು ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ ತಿಳಿಸಿದ್ದಾರೆ.

ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ಸರಕಾರ ಹೊರಡಿಸಿದ ಮಾರ್ಗಸೂಚಿಯಂತೆ ಶ್ರೀಕ್ಷೇತ್ರ ದರ್ಶನಕ್ಕೆ ಅವಕಾಶವಿದೆ. ಹರಕೆಯ ಪೂಜಾ ವಿಧಿಗಳು ಹಾಗೂ ಅನ್ನ ಪ್ರಸಾದ ವ್ಯವಸ್ಥೆ ಮುಂದಿನ ಆದೇಶದವರೆಗೆ ಇರುವುದಿಲ್ಲ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

(ವರದಿ- ಯೋಗೀಶ್ ಕುಂಭಾಸಿ)

Comments are closed.