ಕರಾವಳಿ

ಸಚಿವರಿಗೆ ಖಾತೆ ಹಂಚಿಕೆ: ಸಿದ್ದರಾಮಯ್ಯಗೆ ಹಣಕಾಸು, ಡಿಕೆಶಿಗೆ ಜಲಸಂಪನ್ಮೂಲ, ಜಿ. ಪರಮೇಶ್ವರ್ ಹೋಮ್ ಮಿನಿಸ್ಟರ್

Pinterest LinkedIn Tumblr

ಬೆಂಗಳೂರು: ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಸಾಧಿಸಿತ್ತು. ಕಳೆದ ವಾರ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ ಹತ್ತು ಮಂದಿ ಸಂಪುಟ ಸಚಿವರ ಪ್ರಮಾಣ ವಚನ ಸ್ವೀಕರಿಸಿದ್ದು ಇಂದು (ಮೇ.28 ಶನಿವಾರ) ಮತ್ತೆ ಸಂಪುಟ ವಿಸ್ತರಣೆಯಲ್ಲಿ 24 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ. ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆಯನ್ನು ಮುಖ್ಯಮಂತ್ರಿಗಳೇ ಇಟ್ಟುಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ನೀಡಲಾಗಿದೆ.

ಯಾರಿಗೆ ಯಾವ ಖಾತೆ..?:
ಡಾ. ಜಿ. ಪರಮೇಶ್ವರ್- ಗೃಹ ಇಲಾಖೆ
ಹೆಚ್ ಕೆ ಪಾಟೀಲ್- ಸಣ್ಣ ನೀರಾವರಿ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರ,
ಕೆ.ಹೆಚ್ ಮುನಿಯಪ್ಪ- ಆಹಾರ ಮತ್ತು ನಾಗರಿಕ ಪೂರೈಕೆ,
ಕೆ. ಜೆ ಜಾರ್ಜ್ – ಇಂಧನ,
ಎಂಬಿ ಪಾಟೀಲ್- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಐಟಿ ಬಿಟಿ,
ರಾಮಲಿಂಗಾರೆಡ್ಡಿ- ಸಾರಿಗೆ,
ಸತೀಶ್ ಜಾರಕಿಹೊಳಿ- ಲೋಕೋಪಯೋಗಿ ಇಲಾಖೆ,
ಪ್ರಿಯಾಂಕ್ ಖರ್ಗೆ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್,
ಜಮೀರ್ ಅಹ್ಮದ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ,
ಕೃಷ್ಣ ಬೈರೇಗೌಡ- ಕಂದಾಯ,
ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ,
ಚಲುವರಾಯ ಸ್ವಾಮಿ- ಕೃಷಿ,
ಕೆ. ವೆಂಕಟೇಶ್- ಪಶು ಸಂಗೋಪನಾ ಮತ್ತು ರೇಷ್ಮೆ,
ಹೆಚ್.ಸಿ. ಮಹಾದೇವಪ್ಪ- ಸಮಾಜ ಕಲ್ಯಾಣ,
ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ,
ಎನ್ ರಾಜಣ್ಣ- ಸಹಕಾರ,
ಶರಣಬಸಪ್ಪ ದರ್ಶನ್ ಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು,
ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ,
ಆರ್. ಬಿ.ತಿಮ್ಮಾಪುರ್ ಅಬಕಾರಿ-ಮುಜರಾಯಿ,
ಎಸ್ ಎಸ್ ಮಲ್ಲಿಕಾರ್ಜುನ್- ಗಣಿ ಮತ್ತು ಭೂವಿಜ್ಞಾನ,
ಶಿವರಾಜ್ ತಂಗಡಗಿ- ಹಿಂದುಳಿದ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ,
ಶರಣ ಪ್ರಕಾಶ್ ಪಾಟೀಲ್- ಉನ್ನತ ಶಿಕ್ಷಣ,
ಮಂಕಾಳ ವೈದ್ಯ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ,
ಲಕ್ಷ್ಮಿ ಹೆಬ್ಬಾಳ್ ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,
ರಹೀಂಖಾನ್- ಪೌರಾಡಳಿತ ಮತ್ತು ಹಜ್,
ಡಿ.ಸುಧಾಕರ್- ಮೂಲಸೌಕರ್ಯ ಅಭಿವೃದ್ಧಿ, ಯೋಜನಾ ಮತ್ತು ಸಾಂಖ್ಯಿಕ ಇಲಾಖೆ,
ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ,
ಎನ್ ಎಸ್ ಬೋಸ್ ರಾಜ್- ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ,
ಬೈರತಿ ಸುರೇಶ್- ನಗರಾಭಿವೃದ್ಧಿ, ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ,
ಎಂ.ಸಿ ಸುಧಾಕರ್- ವೈದ್ಯಕೀಯ ಶಿಕ್ಷಣ,
ಕೆ.ಎನ್ ರಾಜಣ್ಣ- ಸಹಕಾರ,
ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ,
ಬಿ. ನಾಗೇಂದ್ರ- ಯುವಜನ ಸೇವೆ, ಕ್ರೀಡೆ ಮತ್ತು ಸಂಸ್ಕೃತಿ ಖಾತೆ

 

 

Comments are closed.