ಕುಂದಾಪುರ: ಖಾಸಗಿ ಬಸ್ ಡಿವೈಡರ್ ಗೆ ತಾಗಿದ ಪರಿಣಾಮ ಪಲ್ಟಿಯಾಗಿದ್ದು ಬಸ್ ನಲ್ಲಿದ್ದ 15 ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ 66 ರ ಮುಳ್ಳಿಕಟ್ಟೆ ಸಮೀಪದ ಅರಾಟೆ ಎಂಬಲ್ಲಿ ಬುಧವಾರ ರಾತ್ರಿ ವೇಳೆ ಸಂಭವಿಸಿದೆ.
ಕುಂದಾಪುರದಿಂದ ಬೈಂದೂರು ಕಡೆಗೆ ಸಂಚರಿಸುತ್ತಿದ್ದ ಬಸ್ ಚಾಲಕನ ವೇಗದ ಹಾಗೂ ನಿರ್ಲಕ್ಷ್ಯ ತನದ ಚಾಲನೆಯಿಂದ ಈ ಅವಘಢ ಸಂಭವಿಸಿದೆ ಎನ್ನಲಾಗಿದೆ.
ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಹೆಚ್ಚಿನ ಹಾನಿ ಸಂಭವಿಸಿಲ್ಲ. ಗಂಗೊಳ್ಳಿ ಎಸ್ ಐ ಹರೀಶ್ ಆರ್. ಹಾಗೂ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಹಾಗೂ ಹೆದ್ದಾರಿಯ ವಾಹನ ದಟ್ಟಣೆ ನಿವಾರಿಸುವಲ್ಲಿ ನೆರವಾದರು. ಗಾಯಾಳುಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಗಂಗೊಳ್ಳಿಯ 24*7 ಆಂಬುಲೆನ್ಸ್ ನ ಇಬ್ರಾಹಿಂ ಗಂಗೊಳ್ಳಿ ಹಾಗೂ ಸ್ಥಳೀಯರು ಗಾಯಾಳುಗಳನ್ನು ಕುಂದಾಪುರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ಯಲು ಸಹಕರಿಸಿದರು.
Comments are closed.