ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ನಟಿ ಸಂಜನಾ ವಿಚಾರಣೆ ವೇಳೆ ಸ್ಪೋಟಕ ಹೇಳಿಕೆಯೊಂದನ್ನು ನೀಡಿರುವುದಾಗಿ ವರದಿಯಾಗಿದೆ.
ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ಮಾಡುತ್ತಿದ್ದ, ಈ ವೇಳೆ ಸಂಜನಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬರೋಬ್ಬರಿ 24 ಮಂದಿಯ ಹೆಸರನ್ನು ತಿಳಿಸಿದ್ದಾರೆ ಎಂಬ ಮಾಹಿತಿ ಬಹಿರಂಗಗೊಂಡಿದೆ.
ಸಿಸಿಬಿ ಕಚೇರಿಯಲ್ಲಿ ಡ್ರಗ್ಸ್ ಮಾಫಿಯಾ ಬಗ್ಗೆ ಸಂಜನಾರನ್ನು ಅಧಿಕಾರಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಮೊದಲಿಗೆ ಸಂಜನಾ ಯಾವ ಪ್ರಶ್ನೆಗಳಿಗೂ ಸರಿಯಾಗಿ ಉತ್ತರ ಕೊಡುತ್ತಿರಲಿಲ್ಲ. ನಂತರ ಸಿಸಿಬಿ ಅಧಿಕಾರಿಗಳು ದಾಖಲೆ ಸಮೇತ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಸಂಜನಾ 24 ಮಂದಿಯ ಹೆಸರನ್ನು ಬಾಯಿಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಆ 24 ಜನರ ಯಾರು ಎಂಬುದು ಅಧಿಕೃತವಾಗಿ ಇನ್ನೂ ತಿಳಿದುಬಂದಿಲ್ಲ. ಆದರೆ ಬೆಂಗಳೂರಿನ ಮಾಜಿ ಶಾಸಕರ ಮಗ, ಸ್ಯಾಂಡಲ್‍ವುಡ್ ಇಬ್ಬರು ತಾರೆಯರು, ಕಿರುತೆರೆಯ ನಾಲ್ಕು ಜನರ ಜೊತೆ ಸ್ನೇಹ ಮಾಡಿದ್ದೇನೆ. ಅಲ್ಲದೇ ಪ್ರಸಿದ್ಧ ಬ್ಯುಸಿನೆಸ್ ಮ್ಯಾನ್ ಮಕ್ಕಳು ಜೊತೆಯಲ್ಲಿ ಪಾರ್ಟಿ ಮಾಡಿರುವುದಾಗಿ ಸಿಸಿಬಿ ಮುಂದೆ ಸಂಜನಾ ತಪ್ಪೊಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
Comments are closed.