ಕರಾವಳಿ

ಕೋಟ‌ ಮಧುವನ ಸಮೀಪದ ಈಸಿಆರ್ ಕಾಲೇಜಿನಲ್ಲಿ ಗಣೇಶ ಚತುರ್ಥಿ ಸಂಭ್ರಮ ಜೋರು..!

Pinterest LinkedIn Tumblr

(ವರದಿ- ಯೋಗೀಶ್ ಕುಂಭಾಸಿ)

ಕುಂದಾಪುರ: ಕೋಟ ಸಮೀಪದ ಮಧುವನ ಅಚ್ಲಾಡಿಯಲ್ಲಿರುವ ಈಸಿಆರ್ ಇನ್ಸಿಟ್ಯೂಟ್ ಆಫ್ ಮ್ಯಾನೇಜೆಂಟ್ ಸ್ಟಡಿ ಕಾಲೇಜಿನಲ್ಲಿ ಗಣೇಶ ಚತುರ್ಥಿ ಸಂಭ್ರಮ ಜೋರಾಗಿತ್ತು.

ನಿತ್ಯ ಓದಿನಲ್ಲಿ ಬ್ಯುಸಿಯಾಗುತ್ತಿದ್ದ ವಿದ್ಯಾರ್ಥಿಗಳು ಹಬ್ಬದ ಜೋಷ್’ನಲ್ಲಿದ್ದರು. ಕಾಲೇಜು ಕ್ಯಾಂಪಸನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ವಿವಿಧ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಮಾರ್ಗದರ್ಶನದಲ್ಲಿ ಇದೇ ಮೊದಲ ಬಾರಿಗೆ ಚೌತಿ ಸಂಭ್ರಮವನ್ನು ಕಾಲೇಜಿನಲ್ಲಿ ಹಮ್ಮಿಕೊಂಡು ವಿದ್ಯಾರ್ಥಿಗಳು ಖುಷಿಪಟ್ಟರು.

Comments are closed.