ಬೆಂಗಳೂರು: ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದ್ದು ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ. ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ ಎಂದ ಮೋದಿ, ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್ ಎಂದು ಹೆಸರಿಟ್ಟರು. ಈ ತಿರಂಗ ಪಾಯಿಂಟ್ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್ ಇನ್ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ ಎಂದು ಖುಷಿಯಿಂದ ಮುಕ್ತಕಂಠದಿಂದ ಇಸ್ರೊ ವಿಜ್ಞಾನಿಗಳನ್ನು ಶ್ಲಾಘಿಸಿ ಬೆಂಗಳೂರಿನ ಇಸ್ರೊ ಕಚೇರಿಯಲ್ಲಿಂದು ಘೋಷಿಸಿದರು.
ರಾಷ್ಟ್ರೀಯ ಬಾಹ್ಯಾಕಾಶ ದಿನ: ಚಂದ್ರನ ಮೇಲೆ ಪ್ರಜ್ಞಾನ್ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್ ಸೆಂಟರ್ನಲ್ಲಿ ಪ್ರಧಾನಿ ಮೋದಿ ಹೇಳಿದರು. ಚಂದ್ರನ ಮೇಲೆ ಪ್ರಜ್ಞಾನ್ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್ ಸೆಂಟರ್ನಲ್ಲಿ ಪ್ರಧಾನಿ ಮೋದಿ ಹೇಳಿದರು.
ವಿಶ್ವದ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಭಾರತ ಪರಿಹಾರ ಕಂಡಿದೆ. ನಿಮ್ಮೆಲ್ಲರ ಈ ಸಾಧನೆ ಇತರರಿಗೆ ಸ್ಪೂರ್ತಿದಾಯಕವಾಗಿದೆ. ನೀವೆಲ್ಲರೂ ಸೇರಿ ಭಾರತದ ಕನಸನ್ನು ನನಸು ಮಾಡಿದ್ದೀರಿ. ನಾನು ವಿದೇಶದಲ್ಲಿದ್ದೆ, ಆದರೆ ನನ್ನ ಹೃದಯವು ಎಲ್ಲಾ ಸಮಯದಲ್ಲೂ ಸಂಪೂರ್ಣವಾಗಿ ನಿಮ್ಮೊಂದಿಗಿತ್ತು ಎಂದು ವಿಜ್ಞಾನಿಗಳನ್ನು ಉದ್ದೇಶಿಸಿ ಮೋದಿ ಹೇಳಿದರು.
ಚಂದ್ರಯಾನ-2 ಪತನಗೊಂಡ ಸ್ಥಳಕ್ಕೆ ‘ತಿರಂಗಾ’ ಎಂದು ಹೆಸರಿಸೋಣ. ಭಾರತ ಚಂದ್ರಯಾನ ಹಾಗೂ ಮಂಗಳಯಾನದಲ್ಲಿ ಯಶಸ್ಸನ್ನು ಗಳಿಸಿ ಮಾನವಸಹಿತ ಗಗನಯಾನಕ್ಕೆ ಸಿದ್ಧತೆ ನಡೆಸುತ್ತಿದೆ. ಈ ಮೂಲಕ ಭಾರತೀಯ ನೆಲ, ಇಲ್ಲಿನ ಜನರ ಮನ ಹಾಗೂ ಚಂದ್ರನಲ್ಲೂ ತಿರಂಗಾ ಮನೆ ಮಾಡಿದೆ ಎಂದು ಅವರು ಹೇಳಿದರು.
ಚಂದ್ರಯಾನದಿಂದ ಮನುಕುಲ ಅಭಿವೃದ್ಧಿ ಸಾಧ್ಯವಿದೆ. ಹಿಮಾಲಯದಿಂದ ಕನ್ಯಾಕುಮಾರಿ ವರೆಗೂ ಜೋಡಿಸುವ ಸಾಮರ್ಥ್ಯ ಇದೆ. ಶಿವನಲ್ಲಿ ಮಾನವನ ಅಭಿವೃದ್ಧಿ ಇದೆ. ಚಂದ್ರಯಾನ-3 ರ ಯಶಸ್ಸಿನಿಂದಾಗಿ ಮೇಕ್ ಇನ್ ಇಂಡಿಯಾದ ಮೇಲೆ ಬಲವಾದ ನಂಬಿಕೆ ಮೂಡುತ್ತಿದೆ ಎಂದು ಮೋದಿ ಅಭಿಪ್ರಾಯಪಟ್ಟರು.
Comments are closed.