ಕರ್ನಾಟಕ

ಸಂತಸ ಅರಳುವ ಸಮಯ-ಮಲೆನಾಡಿಗೆ ಇದು ರಮ್ಯ ಚೈತ್ರ ಕಾಲ: ಶಿವಮೊಗ್ಗಕ್ಕೆ ಮೊದಲ ವಿಮಾನ, ಹೊಸ ಆರಂಭ..!

Pinterest LinkedIn Tumblr

ಶಿವಮೊಗ್ಗ: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಸೇವೆ ಗುರುವಾರದಿಂದ ಆರಂಭಗೊಂಡಿದೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗಕ್ಕೆ ತೆರಳಿದ ಮೊದಲ ಇಂಡಿಗೋ ವಿಮಾನದಲ್ಲಿ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ, ಸಚಿವ ಎಂ.ಬಿ ಪಾಟೀಲ್​, ಶಾಸಕ ಬೇಳೂರು ಗೋಪಾಲಕೃಷ್ಣ, ಸಂಸದ ರಾಘವೇಂದ್ರ, ವಿಜಯೇಂದ್ರ, ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ ಹಲವು ಗಣ್ಯರು ಪ್ರಯಾಣಿಸಿ ಖುಷಿಪಟ್ಟರು.

ವಿಮಾನ ಹತ್ತುವ ಮೊದಲು ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರು, ಈ ಭಾಗದ ರೈತರಿಗೆ ಗೌರವ ಸಲ್ಲಬೇಕು. ಅಡ್ಡಿ ಆತಂಕಗಳಿಲ್ಲದೆಯೇ ರೈತರು ಜಾಗ ಬಿಟ್ಟು ಕೊಟ್ಟ ಪರಿಣಾಮ ಶೀಘ್ರಗತಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಯಿತು. ಸಹಕರಿಸಿದ ಎಲ್ಲಾ ರೈತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇಂದು ನಾವು ವಿಮಾನದಲ್ಲಿ ಇಬ್ಬರು ರೈತರನ್ನು ಕರೆದುಕೊಂಡು ಹೋಗುತ್ತಿದ್ದೇವೆ. ರೈತರ ಆಶೀರ್ವಾದದಿಂದಲೇ ಈ ಕೆಲಸ ಆಗಿದೆ ಎಂದು ಹೇಳಿದರು.

ಸಚಿವ ಎಂ.ಬಿ ಪಾಟೀಲ್​ ಮಾತನಾಡಿ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮಾತನಾಡಿದರು.

ಸಂಸದ ಬಿ.ವೈ ರಾಘವೇಂದ್ರ ಟ್ವೀಟ್ ಮಾಡಿ, “ಸಂತಸ ಅರಳುವ ಸಮಯ-ಮಲೆನಾಡಿಗೆ ಇದು ರಮ್ಯ ಚೈತ್ರ ಕಾಲ: ಮೊದಲ ವಿಮಾನ, ಹೊಸ ಆರಂಭ” ಎಂದು ತಂದೆ ಹಾಗೂ ಇತರ ಗಣ್ಯರೊಂದಿಗಿನ ಫೋಟೋ ಹಂಚಿಕೊಂಡಿದ್ದಾರೆ.

Comments are closed.