ಕರ್ನಾಟಕ

ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ತನ್ನ ಕಾರು ನೀಡಿ ಬೈಕಿನಲ್ಲಿ ತೆರಳಿದ ಸಚಿವೆ ಶೋಭಾ ಕರಂದ್ಲಾಜೆ..!

Pinterest LinkedIn Tumblr

ವಿಜಯನಗರ: ಅಪಘಾತಕ್ಕೀಡಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು‌ ತನ್ನ ಕಾರು ನೀಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಹಾಯ ಹಸ್ತ ಚಾಚಿದ್ದಾರೆ. ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಿಣಿಯಲ್ಲಿ ಭಾಗವಹಿಸಲು ತೆರಳುವ ವೇಳೆ ದಾರಿಯಲ್ಲಿ ಈ ಘಟನೆ ಶನಿವಾರ ನಡೆದಿದೆ.

ಹೊಸಪೇಟೆ ಗ್ರಾಮೀಣ ಭಾಗದ ಹೊರವಲಯದಲ್ಲಿ ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ಸವಾರರ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವೆ, ತಮ್ಮ ಕಾರಿನ ಮೂಲಕ ಅವರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆಯನ್ನು ಮಾಡಿದರು.

ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಬೆಂಗಳೂರಿನಿಂದ ರಸ್ತೆಯ ಮುಖಾಂತರ ತೆರಳುತ್ತಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು, ಅಪಘಾತಕ್ಕೀಡಾಗಿ ಗಾಯಗೊಂಡ ಸವಾರರನ್ನು ಆಸ್ಪತ್ರೆಗೆ ಸೇರಿಸಲು ತಮ್ಮ ವಾಹನವನ್ನು ನೀಡಿ, ಕಾರ್ಯಕಾರಿಣಿ ನಡೆಯುವ ಸ್ಥಳಕ್ಕೆ, ಸುಮಾರು 5 ಕಿ.ಮೀ. ದೂರ ಬೈಕಿನ ಮೂಲಕ ತೆರಳಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಈ ಮಾನವೀಯ ಕಾರ್ಯ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Comments are closed.