ಬೆಂಗಳೂರು: ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ನಿವೇಶನ ಮತ್ತು ಮನೆಗಳನ್ನು ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ. ಸಂತ್ರಸ್ತರಿಗೆ ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರೂ.ವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.
ಕಂದಾಯ ಇಲಾಖೆಯ ಸಾಮಾಜಿಕ ಭದತ್ರೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ `ಹಲೋ ಕಂದಾಯ ಸಚಿವರೇ – 72 ಗಂಟೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ಸಹಾಯವಾಣಿ’ ಲೋಕಾರ್ಪಣೆಗೊಳಿಸಿ ಮುಖ್ಯಮಂತ್ರಿಗಳು ಮಾತನಾಡಿದರು.
ಆ್ಯಸಿಡ್ ದಾಳಿ ಸಂತ್ರಸ್ತರು ತೀವ್ರ ಮಾನಸಿಕ ಸಂಕಟಕ್ಕೆ ಒಳಗಾಗುತ್ತಾರೆ ಮತ್ತು ಸಮಾಜದಿಂದ ತಿರಸ್ಕಾರಕ್ಕೆ ಒಳಗಾಗುತ್ತಾರೆ. ಅವರಿಗೆ ಸಹಾಯ ಮಾಡುವುದು ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಅವರ ಮಾಸಿಕ ಪಿಂಚಣಿಯನ್ನು 3,000 ರೂ.ನಿಂದ 10,000 ರೂ.ಗೆ ಏರಿಸಲಾಗಿದೆ. ಇದಲ್ಲದೇ ನಿವೇಶನ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು. ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ರೂ.ವರೆಗೆ ಆರ್ಥಿಕ ನೆರವು ನೀಡಲಾಗುವುದು, ಇದರಿಂದ ಅವರು ಘನತೆಯಿಂದ ಜೀವನ ನಡೆಸಲು ತಮ್ಮದೇ ಆದ ಉದ್ಯಮವನ್ನು ಪ್ರಾರಂಭಿಸಬಹುದು ಎಂದು ಹೇಳಿದರು.
Comments are closed.