ಕರಾವಳಿ

ಇಂಡಿಯನ್‌ ಐಡಲ್‌ ಫೈನಲಿಸ್ಟ್‌ ನಿಹಾಲ್‌ ತಾವ್ರೋಗೆ ಕಥೊಲಿಕ್‌ ಸಭಾ ವತಿಯಿಂದ ಸನ್ಮಾನ

Pinterest LinkedIn Tumblr

ಉಡುಪಿ: ಕಥೊಲಿಕ್‌ ಸಭಾ ಉಡುಪಿ ಪ್ರದೇಶ್‌ ಇದರ ವತಿಯಿಂದ ಇಂಡಿಯನ್‌ ಐಡಲ್‌ ಫೈನಲಿಸ್ಟ್‌ ನಿಹಾಲ್‌ ತಾವ್ರೋ ಅವರಿಗೆ ಭಾನುವಾರ ಉಡುಪಿ ಶೋಕಮಾತಾ ಇಗರ್ಜಿಯ ಸಭಾಂಗಣದಲ್ಲಿ ಅಭಿನಂದಿಸಲಾಯಿತು.

ಕೆಥೊಲಿಕ್‌ ಸಭಾ ಉಡುಪಿ ಪ್ರದೇಶ ಇದರ ಆಧ್ಯಾತ್ಮಿಕ ನಿರ್ದೇಶಕರಾದ ವಂ|ಫರ್ಡಿನಾಂಡ್‌ ಗೊನ್ಸಾಲ್ವಿಸ್‌ ಅವರು ನಿಹಾಲ್‌ ತಾವ್ರೋ ಗೆ ಶಾಲು ಹೊದಿಸಿ ಫಲಪುಷ್ಪ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ಕೆಥೊಲಿಕ್‌ ಸಭಾ ಉಡುಪಿ ಪ್ರದೇಶ ಇದರ ಅಧ್ಯಕ್ಷರಾದ ಮೇರಿ ಡಿʼಸೋಜಾ ನಿಹಾಲ್‌ ತನ್ನ ಪ್ರತಿಭೆಯಿಂದ ಇಂದು ದೇಶದಲ್ಲಿಯೇ ಒರ್ವ ಉತ್ತಮ ಗಾಯಕರಾಗಿ ಹೆಸರುವಾಸಿಯಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಇವರ ಈ ಸಾಧನೆಗೆ ಅವರ ಕಠಿಣ ಪರಿಶ್ರಮ ಅಡಗಿರುವುದು ಕೂಡ ಅಷ್ಟೇ ಸತ್ಯ. ಅವರ ಸಾಧನೆ ಇತರ ಯುವಜನರಿಗೆ ಪ್ರೇರಣೆಯಾಗಲಿ. ನಿಹಾಲ್‌ ಗಾಯನ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡುವಂತಾಗಲಿ ಎಂದು ಶುಭಹಾರೈಸಿದರು.

ಈ ವೇಳೆ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ.ಡಾ. ಜೆರಾಲ್ಡ್‌ ಐಸಾಕ್‌ ಲೋಬೊ, ಕೆಥೊಲಿಕ್‌ ಸಭಾ ಉಡುಪಿ ಪ್ರದೇಶ ಇದರ ಪ್ರಧಾನ ಕಾರ್ಯದರ್ಶಿ ಗ್ರೆಗರಿ ಪಿಕೆ ಡಿಸೋಜಾ, ನಿಕಟಪೂರ್ವ ಅಧ್ಯಕ್ಷರಾದ ರಾಬರ್ಟ್‌ ಮಿನೇಜಸ್‌, ನಿಯೋಜಿತ ಅಧ್ಯಕ್ಷರಾದ ಸಂತೋಷ್‌ ಕರ್ನೆಲಿಯೋ, ಕೋಶಾಧಿಕಾರಿ ಜೆರಾಲ್ಡ್‌ ರೊಡ್ರಿಗಸ್‌, ಉಡುಪಿ ವಲಯದ ಅಧ್ಯಕ್ಷರಾದ ಲವೀನಾ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Comments are closed.