ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಪರೀಕ್ಷೆಯಲ್ಲಿ ಬ್ರಹ್ಮಾವರದ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜಿಗೆ ಪ್ರಥಮ ರ‍್ಯಾಂಕ್ ಲಭಿಸಿದೆ.
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಪದವಿ ಕಾಲೇಜಿನ ವಿದ್ಯಾರ್ಥಿನಿ ಗೀತಾಂಜಲಿ ಬಿಎಸ್ಸಿ.ಹೆಚ್.ಎಸ್(ಹೋಟೆಲ್ ಮ್ಯಾನೇಜ್ಮೆಂಟ್) 2019-2022 ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಪರೀಕ್ಷೆಯಲ್ಲಿ 91% ಅಂಕಗಳೊಂದಿಗೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ.
ಕಾಲೇಜಿಗೆ ಕೀರ್ತಿಯನ್ನು ತಂದ ವಿದ್ಯಾರ್ಥಿನಿ ಶೈಕ್ಷಣಿಕ ಸಾಧನೆ ಬಗ್ಗೆ ಕಾಲೇಜಿನ ಪ್ರಾಂಶುಪಾಲೆ ಡಾ. ಸೀಮಾ ಜಿ. ಭಟ್, ಕಾಲೇಜಿನ ಸಂಸ್ಥಾಪಕರಾದ ಸುಬ್ರಮಣ್ಯ, ನಿರ್ದೇಶಿಕಿ ಮಮತಾ ಹಾಗೂ ಉಪನ್ಯಾಸಕ ವೃಂದದವರು ಶುಭ ಹಾರೈಸಿದ್ದಾರೆ.
Comments are closed.