ಕರಾವಳಿ

ಕುಂದಾಪುರದಲ್ಲಿ ಸಿಇಟಿ ಪರೀಕ್ಷೆ ಬರೆದ ಸಾವಿರಾರು ವಿದ್ಯಾರ್ಥಿಗಳು; ಇಂದೂ ಕೂಡ ನಡೆಯಲಿದೆ ಎಕ್ಸಾಂ

Pinterest LinkedIn Tumblr

ಕುಂದಾಪುರ: ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಶನಿವಾರ ಮತ್ತು ಭಾನುವಾರ ರಾಜ್ಯದ್ಯಂತ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆ ನಡೆಯಲಿದ್ದು, ಕುಂದಾಪುರದ ಜ್ಯೂನಿಯರ್ ಕಾಲೇಜು ಹಾಗೂ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರವಾಗಿದೆ.

ಜೂನಿಯರ್ ಕಾಲೇಜಿನಲ್ಲಿ 744, ಆರ್.ಎನ್. ಶೆಟ್ಟಿಯಲ್ಲಿ 600 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಿದ್ದಾರೆ. ಬೆಳಿಗ್ಗೆ 9 ಗಂಟೆಯಿಂದಲೇ ಪೋಷಕರು ತಮ್ಮ ಮಕ್ಕಳನ್ನು ಪರೀಕ್ಷಾ ಕೇಂದ್ರದ ವರೆಗೂ ಕರೆತಂದಿದ್ದು ಪರೀಕ್ಷೆ ಮುಗಿಯುವ ತನಕ ಕಾದ ದೃಶ್ಯವೂ ಕಂಡುಬಂದಿತ್ತು.

ಸುವ್ಯವಸ್ಥಿತ ಪರೀಕ್ಷಾ ಪ್ರಕ್ರಿಯೆಗೆ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದ್ದು ಪೊಲೀಸರನ್ನು ನಿಯೋಜಿಸಲಾಗಿದೆ.

Comments are closed.