ಕರಾವಳಿ

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1-7ನೇ ತರಗತಿಯ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತವಾಗಿ 95 ಸಾವಿರ ಶಾಲಾ ಬ್ಯಾಗ್ ವಿತರಣೆ: ಸಂಸದ ಬಿ.ವೈ ರಾಘವೇಂದ್ರ

Pinterest LinkedIn Tumblr

ಶಿವಮೊಗ್ಗ: ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ವತಿಯಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ 1 ನೇ ತರಗತಿಯಿಂದ 7 ನೇ ತರಗತಿವರೆಗಿನ ಸರ್ಕಾರಿ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತವಾಗಿ 95,000 ಶಾಲಾ ಬ್ಯಾಗ್ ಗಳನ್ನು ನೀಡಲಾಗುತ್ತಿದೆ.

ಶುಕ್ರವಾರದಂದು ಶಿವಮೊಗ್ಗ ನಗರದ ದುರ್ಗಿಗುಡಿಯಲ್ಲಿರುವ ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಂಕೇತಿವಾಗಿ ಸಂಸದ ಬಿ.ವೈ ರಾಘವೇಂದ್ರ ಅವರು ಉದ್ಘಾಟಿಸಿದರು.

ಮುಂದಿನ ದಿನಗಳಲ್ಲಿ 8 ರಿಂದ 10 ನೇ ತರಗತಿಯ ಸರ್ಕಾರಿ ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಶಾಲಾ ಬ್ಯಾಗ್ ವಿತರಣೆ ಮಾಡುವ ಗುರಿಯನ್ನು ಹೊಂದಿದ್ದು, ಅದರ ಜೊತೆಗೆ ಉಚಿತವಾಗಿ ಸ್ವೆಟರ್, ನೋಟ್ ಪುಸ್ತಕ ಹಾಗೂ ಇನ್ನಿತರೆ ಕಲಿಕಾ ಉಪಕರಣಗಳನ್ನು ರಾಷ್ಟ್ರೀಯ ಸಾಕ್ಷರತಾ ಮಿಷನ್ ವತಿಯಿಂದ ನೀಡಲಾಗುವುದೆಂದು ಪತ್ರಿಕಾ ಪ್ರಕಟಣೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ.

ಭದ್ರಾವತಿ ತಾಲೂಕಿನಲ್ಲಿ 261 ಶಾಲೆಗಳು,
11,357 ವಿದ್ಯಾರ್ಥಿಗಳು

ಹೊಸನಗರ ತಾಲೂಕಿನಲ್ಲಿ 217 ಶಾಲೆಗಳಲ್ಲಿ
6,772 ವಿದ್ಯಾರ್ಥಿಗಳು

ಸಾಗರ ತಾಲೂಕಿನ 297 ಶಾಲೆಗಳಲ್ಲಿ 10,174 ವಿದ್ಯಾರ್ಥಿಗಳು

ಶಿಕಾರಿಪುರ ತಾಲೂಕಿನ 229 ಶಾಲೆಯಲ್ಲಿ 14,914 ವಿದ್ಯಾರ್ಥಿಗಳು.

ಶಿವಮೊಗ್ಗದ 310 ಶಾಲೆಗಳಲ್ಲಿ 17,909 ವಿದ್ಯಾರ್ಥಿಗಳು

ಸೊರಬದ 306 ಶಾಲೆಗಳಲ್ಲಿ 13,627 ವಿದ್ಯಾರ್ಥಿಗಳು

ತೀರ್ಥಹಳ್ಳಿಯ 201 ಶಾಲೆಗಳಲ್ಲಿ 5,964 ವಿದ್ಯಾರ್ಥಿಗಳು

ಬೈಂದೂರು ತಾಲೂಕಿನ 192 ಶಾಲೆಯ 13,339 ವಿದ್ಯಾರ್ಥಿಗಳು.

ಒಟ್ಟು 8 ವಿಧಾನ ಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ 1 ನೇ ತರಗತಿಯಿಂದ 7 ನೇ ತರಗತಿವರೆಗಿನ ಸರ್ಕಾರಿ ಶಾಲೆಯ 2013 ಶಾಲೆಯ 94,056 ವಿದ್ಯಾರ್ಥಿಗಳಿಗೆ ಈ ಯೋಜನೆ ನೀಡಲಾಗಿದೆ.

Comments are closed.