ಕರಾವಳಿ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉನ್ನತ ಸಾಧನೆ ಮಾಡಿದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜು ಜೆಇಇ ಮೈನ್ಸ್ ಬಿ‌.ಆರ್ಚ್ ಪ್ರವೇಶ ಪರೀಕ್ಷೆಯಲ್ಲಿ 98.22 ಪರ್ಸಂಟೈಲ್

Pinterest LinkedIn Tumblr

ಕುಂದಾಪುರ: ರಾಷ್ಟ್ರೀಯ ಮಟ್ಟದ ಜೆಇಇ ಮೈನ್ಸ್ ಬಿ.ಆರ್ಚ್ ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಯಾ 98.22 ಪರ್ಸಂಟೈಲ್ ಪಡೆದು ಸಾಧನೆ ಮೆರೆದಿದ್ದಾಳೆ.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುವುದರ ಮೂಲಕ ರಾಜ್ಯ,ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಕಾಲೇಜಿನಲ್ಲಿ ತರಬೇತಿ ಪಡೆದ ಸಾವಿರಾರು ವಿದ್ಯಾರ್ಥಿಗಳು ರಾಜ್ಯ, ದೇಶ-ವಿದೇಶದ ಪ್ರತಿಷ್ಟಿತ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆದು ವ್ಯಾಸಾಂಗ ಮಾಡುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುತ್ತಿದ್ದಾರೆ.

ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Comments are closed.