ಮುಂಬಯಿ: ಲಾಕ್ಡೌನ್ ಸೇರಿದಂತೆ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಸರಕಾರ ಜಾರಿಗೆ ತಂದ ನಂತರವೂ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಏರಿಕೆ ಕಾಣುತ್ತಲೇ ಇದೆ. ವಿಶೇಷವಾಗಿ ದಕ್ಷಿಣ ಏಷ್ಯಾದಲ್ಲಿ ಸೋಂಕಿತರ ಸಂಖ್ಯೆ 6000 ದಾಟಿರುವುದು ಭಾರಿ ಆತಂಕ ಉಂಟುಮಾಡಿದೆ. ಈ ನಿಟ್ಟಿನಲ್ಲಿ ಸದ್ಯ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ಡೌನ್ ಮತ್ತಷ್ಟು ದಿನ ವಿಸ್ತರಣೆಯಾಗುವ ಸಾಧ್ಯತೆ ಹೆಚ್ಚಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೊಪೆ ಅವರು, “ಸಾರ್ವಜನಿಕರು ಲಾಕ್ಡೌನ್ ಗಂಭೀರವಾಗಿ ಪರಿಗಣಿಸಿ ನಿರ್ಬಂಧಗಳನ್ನು ಪಾಲಿಸಬೇಕು. ಇಲ್ಲವಾದಲ್ಲಿ ಸದ್ಯ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಹೀಗೆಯೇ ಮುಂದುವರಿದಲ್ಲಿ ಲಾಕ್ಡೌನ್ ವಿಸ್ತರಣೆ ವಿನಃ ಅನ್ಯ ಮಾರ್ಗ ಇರುವುದಿಲ್ಲ’’, ಎಂದಿದ್ದಾರೆ.
ಮುಂಬಯಿ ಮತ್ತು ಮಹಾರಾಷ್ಟ್ರದ ಇತರ ಪ್ರಮುಖ ನಗರಗಳಲ್ಲಿ ಲಾಕ್ಡೌನ್ ವಿಸ್ತರಣೆ ಅನಿವಾರ್ಯ ಮತ್ತು ನಿಶ್ಚಿತ ಎಂದು ಸಚಿವರು ಸುಳಿವು ನೀಡಿದ್ದಾರೆ.
3 ಸಾವಿರ ಗಡಿಯತ್ತ ಕೊರೊನಾ ಸೋಂಕಿತರು: ತಬ್ಲಿಘಿ ಜಮಾತ್ ಕೊಡುಗೆ 1023
ಪಾಕಿಸ್ತಾನ, ಬಾಂಗ್ಲಾದೇಶದಂತಹ ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳಲ್ಲಿ ಮೂಲಭೂತವಾದಿಗಳು ಲಾಕ್ಡೌನ್ ಹಾಗೂ ಸೋಷಿಯಲ್ ಡಿಸ್ಟೆನ್ಸ್ ಕಾಪಾಡಿಕೊಳ್ಳಲು ವಿಫಲರಾಗಿದ್ದಾರೆ. ಸರಕಾರದ ನಿರ್ದೇಶನಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುತ್ತಿದ್ದಾರೆ. ಪರಿಣಾಮ ದಕ್ಷಿಣ ಏಷ್ಯಾದಲ್ಲಿ ಸೋಂಕಿತರ ಸಂಖ್ಯೆ ಎಗ್ಗಿಲ್ಲದೆ ಹೆಚ್ಚಳವಾಗುತ್ತಿದೆ.
Comments are closed.