ಬೆಂಗಳೂರು: ಕಳೆದ 24 ಗಂಟೆಗಳಲ್ಲಿ 9,464 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 130 ಮಂದಿ ಮೃತಪಟ್ಟಿದ್ದಾರೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,40,411ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇನ್ನು ರಾಜ್ಯದಲ್ಲಿ ಇಂದು 130 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,067ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 30 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 130 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,426 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,63,631ಕ್ಕೆ ಏರಿಕೆಯಾಗಿದೆ.
Comments are closed.