ಮಂಗಳೂರು: ಮಂಗಳೂರಿನ ಡೊಂಗರಕೇರಿಯಲ್ಲಿರುವ “ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ಜನವರಿ 10ರಂದು 7ನೇ ವರ್ಷದ ಏಕಾದಶಿ ಆಚರಣೆ ನಡೆಯಲಿದೆ.
ಮಂಗಳವಾರ ಶ್ರೀ ಕ್ಷೇತ್ರದಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ದೇವಳದ ಮೆನೇಜಿಂಗ್ ಟ್ರಷ್ಟಿ ಪ್ರವೀಣ್ ನಾಗ್ವೇಕರ್ ಬೋಳಾರ್ ಅವರು, ಈ ಬಾರಿ 7ನೇ ವರ್ಷದ ಏಕಾದಶಿ ಆಚರಣೆಯನ್ನು ಅದ್ಧೂರಿಯಿಂದ ಆಚರಿಸಲಾಗುವುದು. “ಇಲ್ಲಿ ನಡೆಯುವ ಏಕಾದಶಿ ಕಾರ್ಯಕ್ರಮ ದೇವರ ಅಪ್ಪಣೆಯಂತೆ ನಡೆಯುತ್ತಿದ್ದು ಪ್ರತೀ ಬಾರಿಯಂತೆ ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ತಿಳಿಸಿದರು.
್ಅಂದು ಲೋಕ ಕಲ್ಯಾಣಕ್ಕಾಗಿ ನಾಮತ್ರಯ ಮಹಾಮಂತ್ರ ಜಪಯಜ್ಞ, ಪುಷ್ಪಯಾಗ ಮತ್ತು ಅಷ್ಟಾವಧಾನ ಸೇವೆಯನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸಾಯಂಕಾಲ 4 ಗಂಟೆಗೆ ಡೊಂಗರಕೇರಿ ಕಟ್ಟೆಯಿಂದ ಪುಷ್ಪಯಾಗದ ಹೂವಿನ ವಿಶೇಷ ಮೆರವಣಿಗೆ ನಡೆಯಲಿದೆ” ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದ ಉಸ್ತುವಾರಿ ಗಣೇಶ್ ನಾಗ್ವೇಕರ್ ಬೋಳಾರ್ ಮಾತಾಡಿ “ಅಂದು ಬೆಳಗ್ಗೆ 7ರಿಂದ 8ರವರೆಗೆ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ, ಮಧ್ಯಾಹ್ನ 12ಕ್ಕೆ ಮಹಾಪೂಜೆ, 1ರಿಂದ 3ರವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 9ಕ್ಕೆ ದೀಪಾರಾಧನೆ ಮಹಾಪೂಜೆ ಬಳಿಕ 10 ಗಂಟೆಗೆ ಪ್ರಸಾದ ವಿತರಣೆ ನಡೆಯಲಿದೆ“ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಪ್ರಮುಖರಾದ ವಿನಾಯಕ ಶೇಟ್, ಸಾಯಿದತ್ತ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
ಇಡೀ ಕ್ಷೇತ್ರ ಸಾವಯವ ಸಸ್ಯಗಳಿಂದ ಅಲಂಕಾರ : ಭಕ್ತರಿಗೆ ಪ್ರಸಾದ ರೂಪದಲ್ಲಿ ಸಸ್ಯ ವಿತರಣೆ
ಜನರಲ್ಲಿ ಸಾವಯವ ಮತ್ತು ಆಯುರ್ವೇದ ಸಸ್ಯಗಳ ಬಳಕೆಯ ಬಗ್ಗೆ ಆಸಕ್ತಿ ಮೂಡಿಸಲು ಈ ಬಾರಿ ದೇವಳವನ್ನು ವಿಶೇಷವಾಗಿ ಸಾವಯವ ಸಸ್ಯಗಳಿಂದ ಅಲಂಕಾರ ಮಾಡಲಾಗಿದೆ. ಅದೇ ರೀತಿ ಭಕ್ತರಿಗೆ ಪ್ರಸಾದ ರೂಪದಲ್ಲಿ ಸಸ್ಯವನ್ನು ನೀಡಲು ದೇವಳದ ಆಡಳಿತ ಮಂಡಳಿ ನಿರ್ಧರಿಸಿದೆ.
ಅಲಂಕಾರದಲ್ಲಿ ಪಾಲಕ್, ಹರಿವೆ, ರೆಡ್ ಬಾಸಿಲ್, ಗ್ರೀನ್ ಬಾಸಿಲ್ ಗಿಡಗಳನ್ನು ಬಳಸಲಾಗಿದೆ. ಸರಿಸುಮಾರು 10000ಕ್ಕೂ ಹೆಚ್ಚು ಗಿಡಗಳನ್ನು ಬೆಳೆಸಲಾಗಿದೆ. 8000 ತುಳಸಿ ಗಿಡಗಳನ್ನು ಭಕ್ತರಿಗೆ ನೀಡಲು ಬೆಳೆಸಲಾಗಿದೆ.
Comments are closed.